Breaking Newsಕರ್ನಾಟಕ ರಾಜಕೀಯಸುದ್ದಿ ಸಮಾಚಾರ

ಬಿಜೆಪಿ ಕಟ್ಟಿಹಾಕಲು ವಿರೋಧ ಪಕ್ಷಗಳು ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಜ್ಜು! ಬೆಂಗಳೂರಿಗೆ ಆಗಮಿಸಿದ ಕಾಂಗ್ರೆಸ್ ವರಿಷ್ಠರು

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ವಿಪಕ್ಷಗಳ ಭರ್ಜರಿ ತಯಾರಿ ನಡೆಯುತ್ತಿದೆ.. ಈ ಬಾರಿ ನರೇಂದ್ರ ಮೋದಿಯನ್ನು ಮಣಿಸಲು ವಿಪಕ್ಷಗಳು ಒಗ್ಗಟ್ಟಾಗಿದ್ದು, ಈ ಸಂಬಂಧ ತಂತ್ರಗಳನ್ನು ರೂಪಿಸಲು ಇಂದಿನಿಂದ ಎರಡು ದಿನಗಳ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸಲಿವೆ.

ಸಭೆಗೆ ಮುಖ್ಯವಾಗಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಜೊತೆಗೆ ರಾಹುಲ್ ಗಾಂಧಿ ಆಗಮನ ಮಹಾಘಟಬಂಧನಕ್ಕೆ ಶಕ್ತಿ ಹೆಚ್ಚಿಸಿದೆ ಎಂದು ಕಾಂಗ್ರೆಸ್ ನಾಯಕರು ಅಭಿಪ್ರಾಯ ಪಟ್ಟಿದ್ದಾರೆ.

AICC ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಮತ್ತು ಪಕ್ಷದ ವರಿಷ್ಠರಾದ ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು HAL ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿಗಳು ಸ್ವಾಗತಿಸಿದರು.
AICC ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಮತ್ತು ಪಕ್ಷದ ವರಿಷ್ಠರಾದ ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು HAL ವಿಮಾನ ನಿಲ್ದಾಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ವಾಗತಿಸಿದರು.

Leave a Reply

Your email address will not be published. Required fields are marked *

Back to top button