Breaking Newsಕರ್ನಾಟಕ ರಾಜಕೀಯ

ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಗೆ ಎಐಸಿಸಿಯಿಂದ ಶೋಕಾಶ್‌ ನೋಟಿಸ್

ನವದೆಹಲಿ: ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದಿದ್ದ ಈಡಿಗ, ಬಿಲ್ಲವ, ನಾಮಧಾರಿ, ದೀವರು ಮತ್ತು ಅತಿ ಹಿಂದುಳಿದ ವರ್ಗ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹರಿಹಾಯ್ದಿದ್ದ ಕಾಂಗ್ರೆಸ್‌ ನ ಹಿರಿಯ ನಾಯಕ, ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ಗೆ ಎಐಸಿಸಿ ಶಿಸ್ತು ಸಮಿತಿಯಿಂದ ನೋಟಿಸ್ ಜಾರಿ ಮಾಡಲಾಗಿದೆ.

ಸಿ ಎಂ ಸಿದ್ದರಾಮಯ್ಯ ಅವರನ್ನು ಬಹಿರಂಗವಾಗಿ ಟೀಕಿಸಿ ಹರಿಪ್ರಸಾದ್‌ ಅವರು ಪಕ್ಷದ ಶಿಸ್ತನ್ನು ಉಲ್ಲಂಘನೆ ಮಾಡಿದ್ದಾರೆ. ಆದ್ದರಿಂದ 10 ದಿನಗಳ ಒಳಗೆ ಉತ್ತರ ನೀಡುವಂತೆ ಎಐಸಿಸಿ ಕಾರ್ಯದರ್ಶಿ ತಾರೀಖ್‌ ಅನ್ವರ್‌ ಅವರು ನೀಡಿರುವ ಶೋಕಾಶ್‌ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಪಕ್ಷದ ವರ್ಚಸ್ಸಿಗೆ ಧಕ್ಕೆ ಆಗುವ ಹೇಳಿಕೆಯನ್ನು ಬಿ.ಕೆ. ಹರಿಪ್ರಸಾದ್ ನೀಡಿದ್ದಾರೆ. ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಮಾಲೂರಿನ ಶಾಸಕ ಕೆ.ವೈ. ನಂಜೇಗೌಡ ಮತ್ತಿತರ ಸಿದ್ದರಾಮಯ್ಯ ಅವರ ಬಣದ ಶಾಸಕರು ಕೆಪಿಸಿಸಿ ಹಾಗೂ ಎಐಸಿಸಿ ಶಿಸ್ತು ಸಮಿತಿಯನ್ನು ಒತ್ತಾಯಿಸಿದ್ದರು.

Leave a Reply

Your email address will not be published. Required fields are marked *

Back to top button