Breaking Newsಕರ್ನಾಟಕ ರಾಜಕೀಯ

ಕಾಣೆಯಾಗಿದ್ದ ಬಸ್ ಸ್ಟಾಂಡ್ ಹುಡುಕಿದ್ದೇವೆ ಎಂದು‌ ತಮ್ಮ ಬೆನ್ನನ್ನು ತಾವೇ ತಟ್ಟಿಕೊಂಡ ಸರ್ಕಾರಕ್ಕೆ, ಜಾರ್ಜ್‌, ಡಿಕೆಶಿ ಕಾಣೆಯಾಗಿದ್ದಾರೆ, ಪೋಸ್ಟರ್‌ ಮೂಲಕ ವ್ಯಂಗ್ಯವಾಡಿದ ಬಿಜೆಪಿ

ಬೆಂಗಳೂರು: ಇಂಧನ ಸಚಿವ ಕೆ ಜೆ ಜಾರ್ಜ್‌ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಕಾಣೆಯಾಗಿದ್ದಾರೆ ಎಂಬ ಪೋಸ್ಟರ್‌ ಮೂಲಕ ಬಿಜೆಪಿ ವ್ಯಂಗ್ಯವಾಡಿದೆ.

ಡಿಯರ್‌ ಕಾಂಗ್ರೆಸ್,

ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕೆ ‘ದೊಡ್ಡಮಟ್ಟದಲ್ಲಿ ಸಹಕರಿಸಿದ’ ಋಣವನ್ನು ತೀರಿಸಲು ಹಾಗೂ ಲೋಕಸಭಾ ಚುನಾವಣೆಯ ಬಳಿಕ ಸಿಎಂ ಕುರ್ಚಿಗೆ ಲಾಬಿ ಮಾಡಲು, ಕಾವೇರಿಯನ್ನು ಸ್ಟಾಲಿನ್‌ ನಾಡಿಗೆ ಬೇಕಾಬಿಟ್ಟಿಯಾಗಿ ಹರಿಬಿಟ್ಟು ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ಅವರು ನಾಪತ್ತೆಯಾಗಿದ್ದಾರೆ.

ದಯವಿಟ್ಟು ಹುಡುಕಿಕೊಡಿ ಎಂದು ಮನವಿ ಮಾಡಿದೆ

ಜಾರ್ಜ್‌ ಕಾಣೆಯಾಗಿದ್ದಾರೆ
ಕಾಣೆಯಾಗಿದ್ದ ಬಸ್‌ ಸ್ಟಾಂಡ್‌ನನ್ನು ಕೊನೆಗೂ ಹುಡುಕಿದ್ದೇವೆ ಎಂದು ನಿಮ್ಮ ಬೆನ್ನನ್ನು ನೀವೇ ತಟ್ಟಿಕೊಳ್ಳು‌ತ್ತಿದ್ದೀರಿ, ಇರಲಿ ನಿಮ್ಮ ಸಾಹಸ ನಿಜಕ್ಕೂ ಶ್ಲಾಘನೀಯ!!

ಕರ್ನಾಟಕದಲ್ಲೆಲ್ಲಾ ಕತ್ತಲೆ ಹರಡಿ ನಾಪತ್ತೆಯಾಗಿರುವ ನಿಮ್ಮ ಇಂಧನ ಸಚಿವ ಕೆ. ಜೆ. ಜಾರ್ಜ್ ಅವರನ್ನು ಹುಡುಕಿ ಕೊಡಿ, ರಾಜ್ಯದ ಜನತೆ ಸಂಕಷ್ಟದಲ್ಲಿದ್ದಾರೆ ಎಂದು ವಿವರಿಸಿದೆ.

Leave a Reply

Your email address will not be published. Required fields are marked *

Back to top button