Breaking Newsಸುದ್ದಿ ಸಮಾಚಾರ

ಬಿಜೆಪಿ vs ಬಿಜೆಪಿ ಕಿತ್ತಾಟ ಮತ್ತೊಮ್ಮೆ ಬಹಿರಂಗವಾಗಿದೆ : ಬಿ ಎಲ್‌ ಸಂತೋಷ್‌ ಸಭೆಗೆ ಕಾಂಗ್ರೆಸ್‌ ಟಾಂಗ್‌

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ ಎಲ್‌ ಸಂತೋಷ್‌ ವಿರುದ್ಧ ಕಾಂಗ್ರೆಸ್‌ ವ್ಯಂಗ್ಯವಾಡಿದೆ. ಬಿ ಎಲ್ ಸಂತೋಷ್ ನಾನೇ ಲೀಡರ್ ಎಂಬ ಸಂದೇಶ ರವಾನಿಸಲು ಸಭೆ ನಡೆಸಿದ್ದಾರೆ ಎಂದು ಟಾಂಗ್‌ ನೀಡಿದೆ.

ಬಿಜೆಪಿ ತನ್ನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮಾಡಲು ಸಭೆ ನಡೆಸಬೇಕಿತ್ತು, ನೂತನ ರಾಜ್ಯಾಧ್ಯಕ್ಷರ ನೇಮಕಕ್ಕಾದರೂ ಸಭೆ ನಡೆಸಬೇಕಿತ್ತು.ಆದರೆ ಒಬ್ಬ ವ್ಯಕ್ತಿಯ ಪ್ರತಿಷ್ಠೆಯ ಹಪಹಪಿಯನ್ನು ಸಂತೈಸಲು ಸಭೆ ನಡೆಸಿದೆ!

ಬಿಜೆಪಿಯ ಅಸಮದಾನಿತರು ಈ ಸಭೆಯಿಂದ ದೂರ ಉಳಿಯುವ ಮೂಲಕ #BJPvsBJP ಕಿತ್ತಾಟ ಮತ್ತೊಮ್ಮೆ ಬಹಿರಂಗವಾಗಿದೆ ಹಾಗೂ ಬಿ ಎಲ್‌ ಸಂತೋಷ್‌ ಅವರಿಗೆ ನಯಾಪೈಸೆ ಕಿಮ್ಮತ್ತಿಲ್ಲ ಎಂಬುದನ್ನು ಅನಾವರಣಗೊಂಡಿದೆ.

ಬಿಜೆಪಿ ಪಕ್ಷಕ್ಕೆ ಸಭೆ ಕರೆಯಲು ಒಬ್ಬ ಅಧ್ಯಕ್ಷ ದಿಕ್ಕಿಲ್ಲ,
ಬಿಜೆಪಿ ಶಾಸಕರ ಸಭೆ ನಡೆಸಲು ಒಬ್ಬ ಶಾಸಕಾಂಗ ಪಕ್ಷದ ನಾಯಕನಿಲ್ಲ.

ಜನಪ್ರತಿನಿಧಿಯಾಗಲು ಅರ್ಹತೆ ಇಲ್ಲದ, ನಾಲ್ಕು ಮತಗಳನ್ನು ಸೆಳೆಯಲು ಶಕ್ತಿ ಇಲ್ಲದ ಬಿ ಎಲ್ ಸಂತೋಷ್ ಸಭೆ ನಡೆಸುವ ದುರ್ಗತಿ ಬಂದಿದೆ ಎಂದರೆ ಬಿಜೆಪಿ ಅದೆಷ್ಟು ರಾಜಕೀಯ ದಿವಾಳಿಯಾಗಿರಬಹುದು!

ಬಿ ಎಸ್‌ ಯಡಿಯೂರಪ್ಪ ಅವರಿಗೆ ಸೆಡ್ಡು ಹೊಡೆಯುವುದಕ್ಕೆ ಮಾತ್ರ ಈ ಸಭೆ ಸೀಮಿತವಾಗಿದೆ. ಇತ್ತೀಚಿಗೆ ಬಿಜೆಪಿಯ ಶಾಸಕರು ಯಡಿಯೂರಪ್ಪನವರ ಮನೆಯಲ್ಲಿ ಸಭೆ ಸೇರಿ ನೀವೇ ನಾಯಕತ್ವ ವಹಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದರು.

ಬಿಜೆಪಿ ಶಾಸಕರೆಲ್ಲ ಬಿ ಎಸ್‌ ಯಡಿಯೂರಪ್ಪ ಅವರ ಹಿಂದೆ ಹೋಗಿದ್ದೇ ತಡ ಕುಪಿತರಾದ ಬಿ ಎಲ್ ಸಂತೋಷ್ ನಾನೇ ಲೀಡರ್ ಎಂಬ ಸಂದೇಶ ರವಾನಿಸಲು ಸಭೆ ನಡೆಸಿದ್ದಾರೆ!

ಚುನಾವಣೆಯ ತಂತ್ರಗಾರಿಕೆ ಮಕಾಡೆ ಮಲಗಿ ಹೀನಾಯ ಸೋಲು ಅನುಭವಿಸಿದಾಗ ಇದೇ ಸಂತೋಷ್ ಗಂಟು ಮೂಟೆ ಕಟ್ಟಿಕೊಂಡು ನಾಪತ್ತೆಯಾಗಿದ್ದರು, ಈಗ ಬಿ ಎಸ್‌ ಯಡಿಯೂರಪ್ಪ ಅವರಿಗೆ ಸೆಡ್ಡು ಹೊಡೆಯಲು ಮತ್ತೆ ಪ್ರತ್ಯಕ್ಷರಾಗಿ ಸಭೆ ನಡೆಸಿದ್ದಾರೆ

ಅದೇನೇ ಮಾಡಿದರೂ ಬಿಜೆಪಿಗೆ ಮತ್ತೆ ಜೀವ ಬರುವುದಿಲ್ಲ! ಎಂದು ಸಾಮಾಜಿಕ ಮಾಧ್ಯಮದಲ್ಲಿ ಅಪಹಾಸ್ಯ ಮಾಡಿದೆ.

Leave a Reply

Your email address will not be published. Required fields are marked *

Back to top button