Breaking Newsಮುಖ್ಯಮಂತ್ರಿ ನ್ಯೂಸ್

ಭಾರತದ ಸಂವಿಧಾನ ಪೀಠಿಕೆಯ ‘ಜಾಗತಿಕ ವಾಚನ’ ಬೃಹತ್ ಕಾರ್ಯಕ್ರಮವನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಶುಕ್ರವಾರ ಆಯೋಜಿಸಿದ್ದ ಭಾರತದ ಸಂವಿಧಾನ ಪೀಠಿಕೆಯ ಜಾಗತಿಕ ವಾಚನ ಬೃಹತ್ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಂವಿಧಾನ ಪೀಠಿಕೆ ಓದುವ ಮೂಲಕ ಉದ್ಘಾಟಿಸಿದರು.

ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಗೃಹ ಸಚಿವ ಜಿ.ಪರಮೇಶ್ವರ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಮುನಿಯಪ್ಪ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹಾಗೂ ಸಚಿವರುಗಳಾದ ಮಂಕಾಳ ವೈದ್ಯ, ಸತೀಶ್ ಜಾರಕಿಹೊಳಿ, ಕೆ.ಜೆ.ಜಾರ್ಜ್, ಈಶ್ವರ್ ಖಂಡ್ರೆ, ವಿಧಾನಪರಿಷತ್ ಸಭಾಪತಿ ಹೊರಟ್ಟಿ, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಗೋವಿಂದರಾಜು, ವಿಧಾನ ಪರಿಷತ್ ಸದಸ್ಯರಾದ ಸುದಾಮ್ ದಾಸ್ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Back to top button