Breaking Newsಮುಖ್ಯಮಂತ್ರಿ ನ್ಯೂಸ್

ಮುಖ್ಯಮಂತ್ರಿ ಸಿದ್ದರಾಮಯ್ಯ ಕರಾವಳಿ ಜಿಲ್ಲೆ ಪ್ರವಾಸ/ ಉಡುಪಿ ವಿಡಿಯೊ ವಿವಾದ: ಎಸ್‌ಐಟಿಗೆ ಕೊಡಲ್ಲ: ಮುಖ್ಯಮಂತ್ರಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದಾರೆ.

ಉಡುಪಿಯ ಕಾಲೇಜೊಂದರಲ್ಲಿ ವಿಡಿಯೊ ವಿವಾದ ಭುಗಿಲೆದ್ದ ನಂತರ ಮುಖ್ಯಮಂತ್ರಿಗಳು ಉಡುಪಿಗೆ ಭೇಟಿ ನೀಡುತ್ತಿರುವುದು ಮಹತ್ವ ಪಡೆದುಕೊಂಡಿದೆ.

ಮುಖ್ಯಮಂತ್ರಿಗಳಾದ ನಂತರ ಮೊದಲ ಬಾರಿಗೆ ಸಿದ್ದರಾಮಯ್ಯ ಅವರು ಕರಾವಳಿ ಭಾಗಕ್ಕೆ ಪ್ರವಾಸ ಕೈಗೊಂಡಿದ್ದಾರೆ.

ಎರಡೂ ಜಿಲ್ಲೆಗಳಲ್ಲಿ ಮಳೆಹಾನಿ ಸಂಬಂಧ ಸಭೆ ನಡೆಸಲಿರುವ ಮುಖ್ಯಮಂತ್ರಿಗಳು ಈ ಸಂಬಂಧ ತೀರ್ಮಾನ ಕೈಗೊಳ್ಳಲಿದ್ದಾರೆ.

ಎಸ್‌ಐಟಿ ತನಿಖೆ ಅಗತ್ಯವಿಲ್ಲ:
ಉಡುಪಿ ಕಾಲೇಜಿನಲ್ಲಿ ನಡೆದ ವಿಡಿಯೊ ವಿವಾದ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ವಹಿಸುವ ಅಗತ್ಯವಿಲ್ಲ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಡಿವೈಎಸ್‌ಪಿ ನೇತೃತ್ವದಲ್ಲಿ ತನಿಖೆ ಮುಂದುವರಿಯಲಿದೆ. ಎಸ್‌ಐಟಿಗೆ ಇಷ್ಟು ಬೇಗ ನೀಡುವ ಅಗತ್ಯವಿಲ್ಲ. ಎಂದು ಅವರು ಹೇಳಿದ್ದಾರೆ.

ಕೇಂದ್ರ ಮಹಿಳಾ ಆಯೋಗದ ಸದಸ್ಯರು ಉಡುಪಿಗೆ ಆಗಮಿಸಿ ತನಿಖೆ ಕೈಗೊಂಡು ಕಾಲೇಜಿನ ಶೌಚಾಲಯದಲ್ಲಿ ಕ್ಯಾಮರಾ ಇರಲಿಲ್ಲ ಎಂದು ಹೇಳಿದ್ದಾರೆ. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.

ನೈತಿಕ ಪೊಲೀಸ್‌ ಗಿರಿಗೆ ಅಗತ್ಯ ಕ್ರಮ:
ನೈತಿಕ ಪೊಲೀಸ್‌ ಗಿರಿಯನ್ನು ಯಾರೇ ಮಾಡಿದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಅವರು ಮಂಗಳೂರಿನಲ್ಲಿ ಹೇಳಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.

ಸೌಜನ್ಯ ಪ್ರಕರಣ: ಮೇಲ್ಮನವಿ ಪರಿಶೀಲನೆ:
ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಿಬಿಐ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. ಅವರ ಪೋಷಕರು ಹಾಗೂ ಹೋರಾಟಗಾರರು ಈ ಪ್ರಕರಣದ ಮರುತನಿಖೆಗೆ ಒತ್ತಾಯಿಸಿದ್ದಾರೆ. ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬಹುದೆಂದು ವಿಚಾರ ಮಾಡಲಾಗುದು ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಮ:

ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧ ಅಥವಾ ವ್ಯಕ್ತಿ ಯ ವಿರುದ್ಧವಾಗಿ ಅನಗತ್ಯವಾಗಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿದರೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸುಳ್ಳು ಸುದ್ದಿ ಹಬ್ಬಿಸಿದರೆ ತೆಗೆದುಕೊಳ್ಳಲಾಗುವುದು ಎಂದರು. ಕುಟುಂಬದವರ ಮೇಲೆ ಸುಳ್ಳು ಸುದ್ದಿ ಹಬ್ಬಿಸುವುದು, ವೈಯಕ್ತಿಕವಾಗಿ ತೇಜೋವಧೆ ಮಾಡುವುದು ಬೇರೆ ಎಂದರು.

ಪರಿಸರ ಸಂರಕ್ಷಣೆಯಲ್ಲಿ ಸರ್ಕಾರ ಹಿಂದೆಬೀಳುವುದಿಲ್ಲ
ಕಸ್ತೂರಿ ರಂಗನ್ ವರದಿ ಬಗ್ಗೆ ಕೇಂದ್ರ ಸರ್ಕಾರ ತೀರ್ಮಾನ ಕೈಗೊಳ್ಳಬೇಕಿದೆ. ಪರಿಸರ ಸಂರಕ್ಷಣೆ ಯ ವಿಚಾರದಲ್ಲಿ ಸರ್ಕಾರ ಹಿಂದೆಬೀಳುವುದಿಲ್ಲ ಎಂದರು.

Leave a Reply

Your email address will not be published. Required fields are marked *

Back to top button