Breaking Newsಮುಖ್ಯಮಂತ್ರಿ ನ್ಯೂಸ್

ಶಿಕ್ಷಣ ಕುರಿತ ಕಾರ್ಪೊರೇಟ್ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ಸಮಾವೇಶ| ಶಿಕ್ಷಣಕ್ಕೆ ಒತ್ತು ನೀಡಿ ಉದ್ಯಮ ಕ್ಷೇತ್ರದ ಆರೋಗ್ಯಕರ ಪ್ರಗತಿಗೆ ಮುಂದಾಗಿ: ಮುಖ್ಯಮಂತ್ರಿ

ಬೆಂಗಳೂರು: ಕಾರ್ಪೋರೇಟ್ ಸಂಸ್ಥೆಗಳು ಹಾಗೂ ಉದ್ಯಮ ಕ್ಷೇತ್ರ ಸರ್ಕಾರದ ಜತೆಗೆ ಸಮಾಜದ ಪ್ರಗತಿಗೆ ಕೈ ಜೋಡಿಸಬೇಕು. ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಸಮಾಜ ಮತ್ತು ಉದ್ಯಮ ಕ್ಷೇತ್ರದ ಆರೋಗ್ಯಕರ ಪ್ರಗತಿಗೆ ಮುಂದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಜೆ ಡಬ್ಲ್ಯೂ ಮಾರಿಯೆಟ್ ಹೋಟೆಲ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಶಿಕ್ಷಣ ಕುರಿತ ಕಾರ್ಪೊರೇಟ್ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ತಂತ್ರಜ್ಞಾನ ಮತ್ತು ಉತ್ಪಾದನೆಗೆ ಅಗತ್ಯವಾದ ಕೌಶಲ್ಯ ಹೆಚ್ಚಿಸಲು ಸರ್ಕಾರ ತೀರ್ಮಾನಿಸಿದೆ. ಉದ್ಯಮಕ್ಕೆ ಅಗತ್ಯವಾದ ಕೌಶಲ್ಯ ಹೊಂದಿರುವ ಯುವ ಸಮೂಹವನ್ನು ಸೃಷ್ಟಿಸಲಾಗುವುದು ಎಂದು ಹೇಳಿದರು.

ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗದವರಿಗೂ ಅನ್ವಯ ಆಗುವ ರೀತಿಯಲ್ಲಿ ಐದು ಗ್ಯಾರಂಟಿಗಳನ್ನು ರೂಪಿಸಿದೆವು. ನಾಡಿನ ಮಹಿಳೆಯರಿಗೆ ಆರ್ಥಿಕ‌ ಶಕ್ತಿ ಬಂದಿದೆ ಎಂದರು.

ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಎಂ.ಬಿ.ಪಾಟೀಲ, ಮಧು ಬಂಗಾರಪ್ಪ, ಡಾ.ಎಂ.ಸಿ.ಸುಧಾಕರ್, ಜಿ.ಪರಮೇಶ್ವರ್, ಶರಣಪ್ರಕಾಶ್ ಪಾಟೀಲ್, ಡಿ.ಸುಧಾಕರ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Back to top button