Breaking Newsಮುಖ್ಯಮಂತ್ರಿ ನ್ಯೂಸ್ಸಚಿವರ ಕಚೇರಿಯಿಂದಸುದ್ದಿ ಸಮಾಚಾರ

ಮತಾಂತರ ತಡೆ ಕಾಯ್ದೆ ತಿದ್ದುಪಡಿ ಅಸಂವಿಧಾನಿಕ | ಅಲ್ಪಸಂಖ್ಯಾತರಿಗೆ ಮುಂದಿನ ವರ್ಷದಿಂದ ಹೆಚ್ಚಿನ ಅನುದಾನ | ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಮತಾಂತರ ತಡೆ ಕಾಯ್ದೆ ಅಸಂವಿಧಾನಿಕವಾಗಿದ್ದು, ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಕಾಯಿದೆಗೆ ತಂದಿರುವ ತಿದ್ದುಪಡಿಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂಡಿಯನ್ ಕ್ರಿಶ್ಚಿಯನ್ ಫೋರಮ್ ಪರವಾಗಿ ಪಾದ್ರಿಗಳ ನಿಯೋಗ ಮತ್ತು ವಿವಿಧ ಕ್ರಿಶ್ಚಿಯನ್ ಸಂಘಟನೆಗಳ ಮುಖಂಡರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯದ ಎಲ್ಲ ಸಮುದಾಯಗಳ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸಲಾಗುವುದು ಮತ್ತು ಆ ಸಮುದಾಯಗಳಿಗೆ ಸೇರಿದವರಿಗೆ ಅಗತ್ಯ ರಕ್ಷಣೆ ನೀಡಲಾಗುವುದು. ಈ ಹಿನ್ನೆಲೆಯಲ್ಲಿ ಅಸಂವಿಧಾನಿಕವಾಗಿರುವ ಮತಾಂತರ ತಡೆ ಕಾಯ್ದೆಗೆ ತಂದಿರುವ ತಿದ್ದುಪಡಿಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ ಎಂದು ನಿಯೋಗಕ್ಕೆ ಭರವಸೆ ನೀಡಿದ್ದೇನೆ. ಅಲ್ಲದೇ, ಈ ಕಾಯ್ದೆಯಡಿ ಪಾದ್ರಿಗಳ ವಿರುದ್ಧ ದಾಖಲಾಗಿರುವ ಸುಳ್ಳು ಪ್ರಕರಣಗಳನ್ನು ಪರಿಶೀಲಿಸಲಾಗುವುದು ಎಂದರು.

ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ:

ಮುಸ್ಲಿಂ ಸಮುದಾಯದ ಮುಖಂಡರು ಸಿಎಂ ಅವರನ್ನು ಭೇಟಿಯಾಗಿದ್ದು, ಈ ಸಂದರ್ಭ ಮಾತನಾಡಿದ ಸಿಎಂ, ಈಗಾಗಲೇ ಕಾಂಗ್ರೆಸ್ ಭರವಸೆಗಳನ್ನು ಜಾರಿಗೊಳಿಸುತ್ತಿದೆ. ಆದ್ದರಿಂದ ಮುಂದಿನ ವರ್ಷದಿಂದ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ತಿಳಿಸಿದರು.

Leave a Reply

Your email address will not be published. Required fields are marked *

Back to top button