Breaking Newsಕರ್ನಾಟಕ ರಾಜಕೀಯಸುದ್ದಿ ಸಮಾಚಾರ

ಟ್ರಬಲ್ ಶೂಟರ್ ಡಿ.ಕೆ.ಶಿ.ಗೆ ಮತ್ತೊಮ್ಮೆ ರಾಷ್ಟ್ರ ರಾಜಕಾರಣದ ಹೊಣೆ..!!

ಬೆಂಗಳೂರಿನಲ್ಲಿ ನಡೆಯುವ ದೇಶದ ಪ್ರತಿಪಕ್ಷಗಳ ಸಭೆ| ಸಭೆಯಲ್ಲಿ ಭಾಗವಹಿಸುವ ಪ್ರಮುಖರು, ಪಕ್ಷಗಳ ವಿವರ ಹೀಗಿದೆ…


ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೇರಲು ಮಹತ್ವದ ಪಾತ್ರ ವಹಿಸಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ರಾಷ್ಟ್ರ ರಾಜಕಾರಣದ ಪ್ರಮುಖ ಜವಾಬ್ದಾರಿಯೊಂದನ್ನು ವಹಿಸಲಾಗಿದೆ.
ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಜುಲೈ 17 ಮತ್ತು 18ರಂದು ದೇಶದ ಪ್ರತಿಪಕ್ಷಗಳು ಬೆಂಗಳೂರಿನ ಖಾಸಗಿ ಹೋಟೆಲಿನಲ್ಲಿ ಸಭೆ ಸೇರಲಿವೆ. ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದಲ್ಲಿ ವಿರೋಧ ಪಕ್ಷಗಳು ಸಭೆ ಸೇರುತ್ತಿರುವ ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ಪ್ರತಿಪಕ್ಷಗಳು ಎರಡನೇ ಬಾರಿಗೆ ಸಭೆ ನಡೆಸಲು ಮುಂದಾಗಿವೆ. ಇದರ ಸಿದ್ಧತೆಯ ಉಸ್ತುವಾರಿಯನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಸಿದ್ಧತೆಯ ಉಸ್ತುವಾರಿ ವಹಿಸಲಾಗಿದೆ.
ಈ ಮೊದಲು ಬಿಹಾರ ರಾಜಧಾನಿ ಪಟ್ನಾದಲ್ಲಿ ಸಭೆ ಸೇರಿ ಚರ್ಚೆ ನಡೆಸಿದ್ದವು. ಬೆಂಗಳೂರಿನಲ್ಲಿ ನಡೆಯುತ್ತಿರುವ 2ನೇ ಸಭೆಗೆ 24 ವಿರೋಧ ಪಕ್ಷದ ನಾಯಕರನ್ನು ಆಹ್ವಾನಿಸಲಾಗಿದೆ. ರಾಷ್ಟ್ರದ ಹಲವಾರು ಪ್ರಮುಖ ನಾಯಕರಿಗೆ ಆಹ್ವಾನ ನೀಡಲಾಗಿದೆ. ಸೋನಿಯಾ ಗಾಂಧಿ ಭಾಗವಹಿಸಲಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಖುದ್ದಾಗಿ ಸಭೆಗೆ ಹಾಜರಾಗುವಂತೆ ಸೋನಿಯಾ ಗಾಂಧಿ ಫೋನ್ ಕರೆ ಮೂಲಕ ತಿಳಿಸಿದ್ದಾರೆ ಎಂದು ವರದಿಯಾಗಿದೆ.
ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಈ ಸಭೆಯಲ್ಲಿ ಭಾಗವಹಿಸಬಹುದು. ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ (ಎಸ್ಪಿ) ನಾಯಕ ಅಖಿಲೇಶ್ ಯಾದವ್ ಅವರೊಂದಿಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಮ್ ಗೋಪಾಲ್ ಯಾದವ್ ಕೂಡ ಆಗಮಿಸುವ ಸಾಧ್ಯತೆಯಿದೆ. ರಾಷ್ಟ್ರೀಯ ಲೋಕದಳದ ಮುಖ್ಯಸ್ಥ ಜಯಂತ್ ಚೌಧರಿ ಅವರು ವಿರೋಧ ಪಕ್ಷದ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಬೆಂಗಳೂರಿನಲ್ಲಿ ನಡೆಯುವ ಎರಡು ದಿನಗಳ ಪ್ರತಿಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಖಚಿತಪಡಿಸಿದ್ದಾರೆ.

Leave a Reply

Your email address will not be published. Required fields are marked *

Back to top button