Breaking Newsಕರ್ನಾಟಕ ರಾಜಕೀಯ

ಶತ್ರುವಿನ ಶತ್ರು ಮಿತ್ರ ಎಂಬ ತಂತ್ರಗಾರಿಕೆ ಮೇಲೆ ಹೊಂದಾಣಿಕೆ ಮಾಡಿಕೊಳ್ಳಲು ಸಿಂಗಾಪುರಕ್ಕೆ ತೆರಳಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಶತ್ರುವಿನ ಶತ್ರು ಮಿತ್ರ ಎಂಬ ತಂತ್ರಗಾರಿಕೆ ಮೇಲೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಹೊಂದಾಣಿಕೆ ಮಾಡಿಕೊಳ್ಳುತ್ತಿದ್ದು, ಅದು ಮುಂದುವರಿಯುತ್ತದೆಯೋ ಇಲ್ಲವೋ ಗೊತ್ತಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಡಬ್ಲ್ಯೂಡಿಒ ಒಪ್ಪಂದಕ್ಕೆ ಸಹಿ ಹಾಕಿದ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಸಂದರ್ಭದಲ್ಲಿ ಶಿವಕುಮಾರ್ ಅವರು ಈ ವಿಚಾರ ತಿಳಿಸಿದರು. “ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಹೊಂದಾಣಿಕೆಗೆ ಮುಂದಾಗಿದ್ದು, ಇಲ್ಲಿ ಹಾಗೂ ದೆಹಲಿಯಲ್ಲಿ ಮಾತುಕತೆ ಮಾಡಲಾಗದೇ ಸಿಂಗಾಪುರಕ್ಕೆ ತೆರಳಿದ್ದಾರೆ” ಎಂದರು.

ಇನ್ನು ಪತ್ರಿಕಾಗೋಷ್ಠಿಯ ಪ್ರಶ್ನೋತ್ತರ ವೇಳೆ, ಸಿಂಗಾಪುರದಲ್ಲಿ ಸರ್ಕಾರ ಬೀಳಿಸುವ ತಂತ್ರ ನಡೆಯುತ್ತಿರುವುದು ವ್ಯಾಪಕ ಚರ್ಚೆಯಾಗುತ್ತಿರುವ ಬಗ್ಗೆ ಮಾಧ್ಯಮಗಳು ಕೇಳಿದಾಗ, “ಚರ್ಚೆ ಆಗಬೇಕು. ಹೊರಗೆ ಹೋಗಿ ಚರ್ಚೆ ಮಾಡುವವರು ಹೋಗಲಿ. ಇಲ್ಲಿ ಚರ್ಚೆ ಮಾಡುವವರು ಮಾಡಲಿ. ಎಲ್ಲಿ ಯಾವ ಸಭೆಗಳ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದು ನಮಗೂ ಗೊತ್ತಿದೆ” ಎಂದು ತಿಳಿಸಿದರು.

ಇನ್ನು ತ್ಯಾಜ್ಯ ನಿರ್ವಹಣೆ ವಿಚಾರವಾಗಿ ಮಾತನಾಡಿ, ‘ನಾನು ಕೆಲವು ಪ್ರದೇಶಗಳಿಗೆ ಭೇಟಿ ನಿಡಿದ್ದು, ಅನಿಲ ಹಾಗೂ ತ್ಯಾಜ್ಯ ಇಂಧನ ಉತ್ಪಾದನೆ ಯೋಜನೆಗಳ ಬಗ್ಗೆ ನಾವು ಗಮನಹರಿಸುತ್ತಿದ್ದೇವೆ. ತ್ಯಾಜ್ಯಗಳನ್ನು ಒಂದು ಕಡೆ ಗುಡ್ಡೆ ಹಾಕಿದರೆ ಯಾವುದೇ ಪ್ರಯೋಜನವಿಲ್ಲ. ತ್ಯಾಜ್ಯಗಳನ್ನು ಸುಟ್ಟು ಹಾಕಬೇಕು. ತ್ಯಾಜ್ಯದಿಂದ ವಿದ್ಯುತ್ ಉತ್ಪಾದನಾ ಘಟಕ ನಿಷ್ಕ್ರಿಯವಾಗಿದ್ದು, ಈ ವಿಚಾರವಾಗಿ ಅಧ್ಯಯನ ಮಾಡಲು ಮುಂಬೈ, ದೆಹಲಿ, ಇಂದೋರ್ ಗಳಿಗೆ ಭೇಟಿ ನೀಡಲಾಗುವುದು’ ಎಂದು ತಿಳಿಸಿದರು.

Leave a Reply

Your email address will not be published. Required fields are marked *

Back to top button