Breaking Newsಕರ್ನಾಟಕ ರಾಜಕೀಯ

ಶಾಮನೂರು ಶಿವಶಂಕರಪ್ಪ ಅವರ ಬಳಿ ಚರ್ಚೆ ಮಾಡುತ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಶಾಮನೂರು ಶಿವಶಂಕರಪ್ಪ ಅವರು ಏಕೆ ಹೀಗೆ ಹೇಳಿದ್ದಾರೆ ಎನ್ನುವ ಕುರಿತು ಅವರ ಬಳಿ ಚರ್ಚೆ ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಲಿಂಗಾಯತ ಅಧಿಕಾರಿಗಳದ್ದು ನಾಯಿಪಾಡು ಮತ್ತು ಲಿಂಗಾಯತರಿಗೆ ಡಿಸಿಎಂ ಸ್ಥಾನ ಬೇಡ ಸಿಎಂ ಸ್ಥಾನ ಬೇಕು ಎನ್ನುವ ಹೇಳಿಕೆಯನ್ನು ಮಾಧ್ಯಮದವರು ಪ್ರಸ್ತಾಪಿಸಿದಾಗ, ಹೇಳಿಕೆ ಬಗ್ಗೆ ನನಗೆ ತಿಳಿದಿಲ್ಲ, ತಿಳಿದುಕೊಂಡು ಮಾತನಾಡುತ್ತೇನೆ ಎಂದರು.

ಡಿಜೆ ಹಳ್ಳಿ, ಕೆಜೆ ಹಳ್ಳಿ ಪ್ರಕರಣದ ಮ್ಯಾಜಿಸ್ಟ್ರೇಟ್ ವರದಿಯನ್ನು ಟೀಕಿಸಿದ್ದ ನೀವು ಈಗ ಸ್ವೀಕರಿಸಿದ್ದೀರಿ ಪ್ರಶ್ನೆಗೆ ” ಇದಕ್ಕೆ ಗೃಹ ಸಚಿವರಾದ ಪರಮೇಶ್ವರ್ ಅವರು ಉತ್ತರಿಸುತ್ತಾರೆ” ಎಂದು ಹೇಳಿದರು.

Leave a Reply

Your email address will not be published. Required fields are marked *

Back to top button