Breaking NewsOthersಕರ್ನಾಟಕ ರಾಜಕೀಯಜನ-ಪ್ರತಿನಿಧಿನಮ್ಮ ಶಾಸಕರುಶಾಸಕ ವಾರ್ತೆಸಚಿವರ ಕಚೇರಿಯಿಂದಸುದ್ದಿ ಸಮಾಚಾರ

ಶೀಘ್ರದಲ್ಲೇ ರಾಜ್ಯ ಶಿಕ್ಷಣ ನೀತಿ ಜಾರಿ ಹಾಗು ಕೌಶಾಲ್ಯಾಭಿವೃದ್ಧಿ ಶಿಕ್ಷಣ| ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಹೇಳಿಕೆ

ಸಾಧಕ – ಬಾಧಕ ಚರ್ಚಿಸಿ ರಾಜ್ಯ ಶಿಕ್ಷಣ ನೀತಿ ಜಾರಿ | 2.5 ಲಕ್ಷ ಹುದ್ದೆ ಭರ್ತಿಗೆ ಅನುಕೂಲವಾಗುವಂತೆ ಕೌಶಾಲ್ಯಾಭಿವೃದ್ಧಿ ಶಿಕ್ಷ | ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಹೇಳಿಕೆ

ಕೋಲಾರ: ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಣ ತಜ್ಞರ ಜೊತೆ ಸಮಾಲೋಚನೆ ನಡೆಸಿ ಶೀಘ್ರವೇ ರಾಜ್ಯ ಶಿಕ್ಷಣ ನೀತಿ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಹೇಳಿದರು.

ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಭಾಗಿಯಾಗಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ನೀಡಿದ ಭರವಸೆಯಂತೆ ರಾಷ್ಟ್ರೀಯ ಶಿಕ್ಷಣ ನೀತಿ ಬದಲಿಗೆ ರಾಜ್ಯ ಶಿಕ್ಷಣ ನೀತಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು. ಆದರೆ ಅದಕ್ಕೆ ಮೊದಲು ಶಿಕ್ಷಣ ತಜ್ಞರ ಜೊತೆ ಸಮಾಲೋಚನೆ ನಡೆಸಬೇಕಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಶೈಕ್ಷಣಿಕ ವ್ಯವಸ್ಥೆಯಲ್ಲಿ ಕೆಲವೊಂದು ತೀರ್ಮಾನ ಕೈಗೊಳ್ಳಬೇಕಾಗಿದೆ. ಸದ್ಯ ಯಾವ ಯಾವ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನ ಮಾಡಿದ್ದಾರೆ ಎಂಬ ಮಾಹಿತಿ ಸಂಗ್ರಹಿಸಿ, ಚರ್ಚಿಸಿ, ರಾಜ್ಯದಲ್ಲಿ ಸಕಾರಾತ್ಮಕ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ರಾಷ್ಟ್ರೀಯ ಶಿಕ್ಷಣ ನೀತಿಯಡಿ ಕೌಶಾಲಾಭಿವೃದ್ಧಿ ಶಿಕ್ಷಣವನ್ನು ಅಳವಡಿಸಿಕೊಂಡಿಲ್ಲ. ಇಂದಿನ ಶಿಕ್ಷಣದ ಜೊತೆಗೆ ಕೌಶಾಲ್ಯಾಭಿವೃದ್ದಿಯ ಶಿಕ್ಷಣವನ್ನು ನೀಡುವುದು ತೀರಾ ಅಗತ್ಯ. ಇದರ ಜೊತೆಗೆ ಹೊಸ ನೀತಿಯ ಜಾರಿಗೆ ಮೂಲಸೌಕರ್ಯಗಳ ಅಗತ್ಯವೂ ಇದೆ. ಯಾರನ್ನೋ ಮೆಚ್ಚಿಸಲು ಹೊಸ ನೀತಿಯನ್ನು ಅಳವಡಿಸಿಕೊಂಡಿದ್ದೇವೆ ಎಂದಾಗಬಾರದು ಎಂದರು.

ಈಗಾಗಲೇ ರಾಜ್ಯದಲ್ಲಿ ಸರ್ಕಾರದಲ್ಲಿ ತುಂಬಾ ಖಾಲಿ ಹುದ್ದೆಗಳಿವೆ. ಇದರಲ್ಲಿ 2.5 ಲಕ್ಷ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಘೋಷಿಸಿದ್ದೇವೆ. ಉದ್ಯೋಗಾವಕಾಶ ಕಲ್ಪಿಸುವ ಶಿಕ್ಷಣವನ್ನು ವಿದ್ಯಾರ್ಥಿಗಳು ಪಡೆದಾಗ, ಉದ್ಯೋಗ ಪಡೆದುಕೊಳ್ಳಲು ಪೂರಕವಾಗಲಿದೆ. ಕಾಲೇಜುಗಳಿಗೂ ಇದರ ಲಾಭ ಸಿಗಲಿದೆ ಎಂದರು.

Leave a Reply

Your email address will not be published. Required fields are marked *

Back to top button