Breaking Newsಸುದ್ದಿ ಸಮಾಚಾರ

ಹಾವೇರಿ ಪಟಾಕಿ ಗೋದಾಮು ದುರಂತ: ಬಿಜೆಪಿಯಿಂದ ತಲಾ 1 ಲಕ್ಷ ಪರಿಹಾರ

ಬೆಂಗಳೂರು: ಹಾವೇರಿಯ ಆಲದಕಟ್ಟಿ ಬಳಿ ಪಟಾಕಿ ಗೋದಾಮಿನಲ್ಲಿ ನಡೆದ ಅಗ್ನಿ ಅವಘಡದಲ್ಲಿ ಮೃತಪಟ್ಟ ಕುಟುಂಬದವರಿಗೆ ಪರಿಹಾರವನ್ನು ರಾಜ್ಯ ಬಿಜೆಪಿ ಘೋಷಿಸಿದೆ.

ಮೃತರ ಕುಟುಂಬಗಳಿಗೆ ತಲಾ 1 ಲಕ್ಷ ಪರಿಹಾರ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮೃತ ಕಾರ್ಮಿಕರಿಗೆ ಸಂತಾಪ ಸೂಚಿಸಿರುವ ಅವರು, ಅಗ್ನಿ ಅವಘಡದ ಬಗ್ಗೆ ಸೂಕ್ತ ತನಿಖೆಯಾಗಲಿ. ಅಪಾಯಕಾರಿ ಸ್ಥಳದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದಿರುವುದು ಸರಿಯಲ್ಲ. ರಾಜ್ಯದಲ್ಲಿನ ಪಟಾಕಿ ದಾಸ್ತಾನು ಕೇಂದ್ರಗಳಲ್ಲಿ ಪರಿಶೀಲನೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಆಲದಕಟ್ಟಿಯಲ್ಲಿನ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸಾವಿಗೀಡಾದವರ ಕುಟುಂಬದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ ಐದು ಲಕ್ಷ ರೂ.ಗಳ ಪರಿಹಾರ ಘೋಷಿಸಿದ್ದಾರೆ.

ಆಲದಕಟ್ಟಿಯಲ್ಲಿನ ಪಟಾಕಿ ಗೋದಾಮಿನಲ್ಲಿ ನಡೆದ ಬೆಂಕಿ ಅವಘಡದಲ್ಲಿ ನಾಲ್ವರು ಸಜೀವ ದಹನವಾಗಿದ್ದಾರೆ.

Leave a Reply

Your email address will not be published. Required fields are marked *

Back to top button