Breaking Newsಮುಖ್ಯಮಂತ್ರಿ ನ್ಯೂಸ್

ಗೃಹಲಕ್ಷ್ಮಿ ಯೋಜನೆಗೆ ಅಧಿಕೃತ ಚಾಲನೆ: ಮತ್ತೊಂದು ಗ್ಯಾರಂಟಿ ಜಾರಿ |ಚಾರಿತ್ರಿಕವಾದ ಗೃಹಲಕ್ಷ್ಮಿ ಯೋಜನೆ ಉದ್ಘಾಟನೆ

ಮೈಸೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಗೃಹಲಕ್ಷ್ಮಿಗೆ ಮೈಸೂರಿನಲ್ಲಿ ಇಂದು ಚಾಲನೆ ನೀಡಲಾಯಿತು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಕಾರ್ಯಕ್ರಮ ಕಾಂಗ್ರೆಸ್‌ ಮುಖಂಡ ರಾಹುಲ್‌ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಮಕ್ಕಳ ಮತ್ತು ಮಹಿಳಾ ಮತ್ತು ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಈ ಚಾಲನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರ ನೂರು ದಿನ ಪೂರೈಸಿದ ಹಿನ್ನೆಲೆಯಲ್ಲಿ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.

ಸಾಗರೋಪಾದಿಯಲ್ಲಿ ಹರಿದು ಬಂದಿರುವ ನಾರಿಯರು

ಕೇವಲ ಕರ್ನಾಟಕದಿಂದ ಮಾತ್ರವಲ್ಲದೆ ದಕ್ಷಿಣ ಭಾರತದ ತಮಿಳುನಾಡು, ತೆಲಂಗಾಣ, ಆಂಧ್ರ ಮತ್ತು ಕೇರಳದಿಂದಲೂ ಸಾವಿರಾರು ನಾರಿಯರು, ಗೃಹಿಣಿಯರು “ಗೃಹಲಕ್ಷ್ಮಿ” ಉದ್ಘಾಟನೆಗೆ ಸಾಕ್ಷಿಯಾಗಿದ್ದಾರೆ

ಶ್ರಮಿಕ ವರ್ಗದ, ದುಡಿಯುವ ವರ್ಗಗಳ ಮಹಿಳೆಯರು, ಮಹಿಳಾ ಕಾರ್ಮಿಕರು ಮಹಿಳಾ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಸ್ವಯಂಸ್ಫೂರ್ತಿಯಿಂದ ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಬಂದಿರುವುದು ವಿಶೇಷ

ಕಾಲೇಜು ವಿದ್ಯಾರ್ಥಿನಿಯರು ಕೂಡ ಅಪಾರ ಸಂಖ್ಯೆಯಲ್ಲಿ ಬಂದು ತಮ್ಮ ವಿದ್ಯಾಭ್ಯಾಸಕ್ಕೆ ಬಹಳ ದೊಡ್ಡ ನೆರವಾದ ಶಕ್ತಿ ಯೋಜನೆ ಮತ್ತು ಗೃಹಲಕ್ಷ್ಮಿ ಯೋಜನೆ ಕೊಟ್ಟಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾರ್ಗದುದ್ದಕ್ಕೂ ಅಭಿನಂದನೆ, ಧನ್ಯವಾದ ಹೇಳುವ ಬ್ಯಾನರ್ ಗಳನ್ನು ಹಿಡಿದು ಸಮಾವೇಶಕ್ಕೆ ಆಗಮಿಸಿದ್ದಾರೆ

ಬೆಳಗ್ಗೆ 10 ಗಂಟೆ ವೇಳೆಗೇ ಮಹಾರಾಜ ಗ್ರೌಂಡ್ ನಲ್ಲಿ ತುಂಬಿ ತುಳುಕುತ್ತಿದ್ದ ಮಹಿಳಾ ಜನಸ್ತೋಮ

ಪಿಂಕ್ ಬಣ್ಣದ ಧಿರಿಸಿನಲ್ಲಿ ಸಮಾವೇಶದ ಮೈದಾನದಲ್ಲಿ ಕಂಗೊಳಿಸಿದ ಸಾವಿರಾರು ಸಂಖ್ಯೆಯ ವಿದ್ಯಾರ್ಥಿನಿಯರು ಮತ್ತು ಗೃಹಿಣಿಯರು

ಸರ್ಕಾರದ ಕಾರ್ಯಕ್ರಮ ಮತ್ತು ಯೋಜನೆಗಳ ಚರಿತ್ರೆಯಲ್ಲಿ ಏಕ ಕಾಲಕ್ಕೆ, ಪ್ರತೀ ತಿಂಗಳು ಒಂದೂವರೆ ಕೋಟಿಗೂ ಹೆಚ್ಚು ಮಹಿಳೆಯರನ್ನು ಆರ್ಥಿಕವಾಗಿ ಸಶಕ್ತರನ್ನಾಗಿಸುವ ಸರ್ಕಾರಿ ಚಳವಳಿಯ ಚೈತನ್ಯ ಪಡೆದುಕೊಂಡ ಕಾರ್ಯಕ್ರಮ

Leave a Reply

Your email address will not be published. Required fields are marked *

Back to top button