Breaking Newsಸಚಿವರ ಕಚೇರಿಯಿಂದ

ಗೃಹ ಲಕ್ಷ್ಮಿ ನೋಂದಣಿ ಸ್ಥಗಿತಗೊಂಡಿಲ್ಲ, ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಗೃಹಲಕ್ಷ್ಮೀ ಯೋಜನೆ ನೋಂದಣಿ ಪ್ರಕ್ರಿಯೆ ಸ್ಥಗಿತವಾಗಿಲ್ಲ. ಟಿಬಿಟಿ ಮೂಲಕ ಫಲಾನುಭವಿಗಳಿಗೆ ಹಣ ತಲುಪುತ್ತಿದೆ. ಏಕೆ ಈ ಗೊಂದಲ ಆಗಿದೆ ಎಂದು ಅಧಿಕಾರಿಗಳಿಗೆ ಕೇಳಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಗೃಹಲಕ್ಷ್ಮಿ ನೋಂದಣಿ ಸ್ಥಗಿತವಾಗಿದೆ. ಈಗಾಗಲೇ ನೋಂದಣಿಯಾಗಿರುವವರಿಗೆ ಮಾತ್ರವೇ ಹಣ ನೀಡಲಾಗುತ್ತದೆ ಎಂಬ ಸುದ್ದಿಗಳು ಹರಿದಾಡಿದ್ದವು. ಅದಕ್ಕೆ ಈಗ ಸಚಿವೆ ಉತ್ತರ ನೀಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹರಡಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಇದರಲ್ಲಿ ಭಾಗಿಯಾದವರಿಗೆ ನೋಟಿಸ್‌ ನೀಡಲಾಗುವುದು. ಈ ಸಂಬಂಧ ಇಲಾಖೆ ಕಾರ್ಯದರ್ಶಿಗ ಮತ್ತು ನಿರ್ದೇಶಕರ ಜೊತೆ ಸಭೆ ನಡೆಸಿದ್ದೇನೆ ಎಂದರು.

1.28 ಕೋಟಿ ಯಜಮಾನಿಯರಿಗೆ ಹಣ ನೀಡಲು ಟಾರ್ಗೆಟ್ ಇಟ್ಟುಕೊಳ್ಳಲಾಗಿದೆ. ಯಾರೂ ಕೂಡ ಆತಂಕಕ್ಕೆ ಒಳಗಾಗಬಾರದು. ಈ ರೀತಿ ಗೊಂದಲ ಹರಡಿದ ಅಧಿಕಾರಿಗಳಿಗೆ ನೋಟಿಸ್ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Back to top button