Breaking Newsಕರ್ನಾಟಕ ರಾಜಕೀಯ

ವಾಮಮಾರ್ಗದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರವನ್ನು ಕೂಡಲೇ ವಜಾ ಮಾಡಬೇಕು: ಎಚ್‌ ಡಿ ಕುಮಾರಸ್ವಾಮಿ ಆಗ್ರಹ

ಚನ್ನಪಟ್ಟಣ: ಕುಕ್ಕರ್, ಐರನ್‌ ಬಾಕ್ಸ್‌, ತಾವ ಹಂಚಿ ವಾಮ ಮಾರ್ಗದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಿದೆ. ಇದನ್ನು ಕೂಡಲೇ ವಜಾ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಮೈಸೂರಿನ ವರುಣಾ ಕ್ಷೇತ್ರದಲ್ಲಿ ಮಡಿವಾಳ ಸಮಾಜದ ಮುಖಂಡರು ಕುಕ್ಕರ್, ಇಸ್ತ್ರಿಪೆಟ್ಟಿಗೆಯನ್ನು ಸಾವಿರಾರು ಜನರಿಗೆ ಹಂಚಿದ್ದರಿಂದ ದೊಡ್ಡ ಪ್ರಮಾಣದ ಓಟ್ ಸಿಕ್ಕಿದವು ಎಂದು ಮುಖ್ಯಮಂತ್ರಿಗಳ ಪುತ್ರ, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈರಲ್ ಆದ ಕುರಿತು ಎಚ್‌ಡಿಕೆ ಪ್ರತಿಕ್ರಿಯೆ ನೀಡಿದ್ದಾರೆ.

ಜನರಿಗೆ ಆಸೆ, ಆಮಿಷ ಒಡ್ಡಿ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಚುನಾವಣಾ ಆಯೋಗ ಸೂಕ್ತ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯ ಮಾಡಿದರು.

ಕಾಂಗ್ರೆಸ್ ಪಕ್ಷದ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರೇ ಗ್ಯಾರಂಟಿ ಕೂಪನ್ ಗಳ ಮೇಲೆ ಸಹಿ ಮಾಡಿ ಮನೆಮನೆಗೆ ಹಂಚಿಕೆ ದ್ದಾರೆ. ಆ ಪಕ್ಷದ 135 ಶಾಸಕರ ಸದಸ್ಯತ್ವ ರದ್ದುಗೊಳಿಸುವ ಬಗ್ಗೆ ಆಯೋಗ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈವರೆಗೂ ರಾಜ್ಯದಲ್ಲಿ ಇಂಥಹ ಅಕ್ರಮ ಸರ್ಕಾರ ಬಂದಿಲ್ಲ. ಕೇಂದ್ರ ಸರಕಾರವೂ ಗಿಫ್ಟ್ ಕೂಪನ್ ಹಂಚಿಕೆಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದರು.

ಕುಕ್ಕರ್‌, ಐರನ್‌ ಬಾಕ್ಸ್‌ ವಿತರಣೆ: ವಿ ಸೋಮಣ್ಣ ಪ್ರತಿಕ್ರಿಯೆ
ವರುಣಾ ಕ್ಷೇತ್ರದಲ್ಲಿ ಕುಕ್ಕರ್‌, ಐರನ್‌ ಬಾಕ್ಸ್‌ ವಿತರಣೆ ನನಗೆ ಮಾಹಿತಿ ಇಲ್ಲ. ಯತೀಂದ್ರ ಹೇಳಿಕೆ ಬಗ್ಗೆ ಮಾಹಿತಿ ತರಿಸಿಕೊಳ್ತೇನೆ. ನಮ್ಮ ನಾಯಕರು, ಮುಖಂಡರೊಂದಿಗೆ ಚರ್ಚಿಸಿ ತೀರ್ಮಾನಿಸುವೆ ಎಂದು ವರಣಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಮಾಜಿ ಸಚಿವ ವಿ ಸೋಮಣ್ಣ ಹೇಳಿದ್ದಾರೆ.

ರಾಜ್ಯ ಸರ್ಕಾರ ಕಾಲಹರಣ ಮಾಡುತ್ತಿದೆ
ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧ ಸುಪ್ರೀಂಕೋರ್ಟ್ ಗೆ ಅರ್ಜಿ ಹಾಕ್ತೀವಿ ಅಂತ ರಾಜ್ಯ ಸರ್ಕಾರ ಕಾಲಹರಣ ಮಾಡುತ್ತಿದೆ. ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲು ಮೀನಾಮೇಷ ಎಣಿಸ್ತಿದ್ದಾರೆ. ತಮಿಳುನಾಡಿನವರು ಒಂದು ತಿಂಗಳ ಹಿಂದೆಯೇ ಅರ್ಜಿ ಸಲ್ಲಿಸಿದ್ರು. ತಮಿಳುನಾಡಿಗೂ ಮೊದಲೇ ಅರ್ಜಿ ಸಲ್ಲಿಸಬೇಕಿತ್ತು. ಹೊರನೋಟಕ್ಕೆ ಸಭೆ ಮಾಡಿ ಭಾಷಣ ಮಾಡ್ತಿದ್ದಾರೆ ಕುಮಾರಸ್ವಾಮಿ ಹೇಳಿದ್ದಾರೆ.

Leave a Reply

Your email address will not be published. Required fields are marked *

Back to top button