Breaking Newsಸಚಿವರ ಕಚೇರಿಯಿಂದ

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ, ಸಮರ್ಪಣಾಭಾವ ಸ್ಮರಿಸುವುದು ನಮ್ಮ ಕರ್ತವ್ಯ: ಎಚ್‌ ಕೆ ಪಾಟೀಲ್‌

ಗದಗ: ಇಲ್ಲಿನ ನ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 77 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಕಾನೂನು ಮತ್ತು ಸಂಸದೀಯ ಹಾಗೂ ಪ್ರವಾಸೋದ್ಯಮ ಖಾತೆ ಸಚಿವರಾದ ಎಚ್‌ ಕೆ ಪಾಟೀಲ್‌ ಅವರು ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು.

ನಮ್ಮ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಎಲ್ಲಾ ಸೇನಾನಿಗಳನ್ನು ಸ್ಮರಿಸುವುದು ನಮ್ಮ ಕರ್ತವ್ಯ. ದೇಶಕ್ಕಾಗಿ ಪ್ರಾಣತೆತ್ತ ಮಹಾನ್‌ ಚೇತನಗಳನ್ನು ಗೌರವಿಸೋಣ ಎಂದು ಹೇಳಿದರು.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ತೋರಿದ, ಸತ್ಯ, ಅಹಿಂಸೆ ಎಂಬ ಅಸ್ತ್ರಗಳನ್ನು ಹಿಡಿದು ಸತ್ಯಾಗ್ರಹ ಮಾರ್ಗದಲ್ಲಿ ಸಾಗಿ ಬ್ರಿಟಿಷರ ಗುಂಡಿಗೆ ಎದೆ ಒಡ್ಡಿ, ಲಾಠಿ ಎಟು ತಿಂದ ಹಲವಾರು ಹೋರಾಟಗಾರರಿದ್ದಾರೆ. ಅವರೆಲ್ಲ ಸೇರಿ ದೇಶವನ್ನು ಗುಲಾಮಗಿರಿಯ ಸಂಕೋಲೆಯಿಂದ ಮುಕ್ತಗೊಳಿಸಿದರ ಫಲವಾಗಿ ಇಂದು ನಾವು ಸ್ವಾತಂತ್ರ್ಯ ದಿನಾಚರಣೆ ಆಚರಿಸುತ್ತಿದ್ದೇವೆ ಎಂದರು.

ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ವಿಧಾನ ಪರಿಷತ ಸದಸ್ಯ ಎಸ್.ವಿ.ಸಂಕನೂರ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Back to top button