Breaking Newsಮುಖ್ಯಮಂತ್ರಿ ನ್ಯೂಸ್

ಕ್ಷೀರಭಾಗ್ಯ ಯೋಜನೆಗೆ ಹತ್ತು ವರ್ಷ: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಸ

ಬೆಂಗಳೂರು: ಸಿದ್ದರಾಮಯ್ಯ ಅವರು ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜಾರಿಗೆ ತಂದಿದ್ದ ಕ್ಷೀರ ಭಾಗ್ಯ ಯೋಜನೆ ಹತ್ತು ವರ್ಷ ಪೂರೈಸಿದೆ. ಈ ಹಿನ್ನೆಲೆಯಲ್ಲಿ ಹಾಲಿ ಮುಖ್ಯಮಂತ್ರಿಗಳೂ ಆಗಿರುವ ಸಿದ್ದರಾಮಯ್ಯ ಅವರು ಸಂತಸ ಹಂಚಿಕೊಂಡಿದ್ದಾರೆ.

ಶಾಲಾ ವಿದ್ಯಾರ್ಥಿಗಳಿಗೆ ಬಿಸಿ ಹಾಲು ನೀಡುವ ಕ್ಷೀರಭಾಗ್ಯ ಯೋಜನೆಗೆ ಈಗ ದಶಮಾನೋತ್ಸವದ ಸಂಭ್ರಮ. ಈ ಸಡಗರವನ್ನು ಶಾಲೆಗಳಲ್ಲಿ ಖುಷಿಖುಷಿಯಾಗಿ ಹಾಲು ಕುಡಿಯುತ್ತಿರುವ ಮಕ್ಕಳ ಮುಖಗಳಲ್ಲಿ ನಾನು ಕಾಣುತ್ತಿದ್ದೇನೆ.

ಒಂದನೇ ತರಗತಿಯಲ್ಲಿ ಬಿಸಿ ಹಾಲು ಕುಡಿಯಲಾರಂಭಿಸಿದ ಮಗುವೊಂದು ಈಗ ಹತ್ತನೇ ತರಗತಿಯ ಪ್ರೌಡ ವಿದ್ಯಾರ್ಥಿಯಾಗಿ ಕ್ಷೀರಭಾಗ್ಯ ಯೋಜನೆಯಿಂದ ತನ್ನ ದೇಹಕ್ಕೆ ಬಲ ಬಂತು, ಓದಲು ಹುಮ್ಮಸ್ಸು ಬಂತು ಎಂದೆಲ್ಲ ಹೇಳುತ್ತಿರುವುದನ್ನು ಕೇಳಿದಾಗ ಯೋಜನೆಯ ಉದ್ದೇಶ ಸಾರ್ಥಕವಾಯಿತು ಎಂದು ಅನಿಸುತ್ತದೆ.

ಅಪೌಷ್ಟಿಕತೆ ನಿವಾರಣೆಯ ಜೊತೆಗೆ ಕಲಿಕೆಗೆ ಪ್ರೋತ್ಸಾಹ ನೀಡುವ ಸಲುವಾಗಿ 2013ರಲ್ಲಿ ನಮ್ಮ ಸರ್ಕಾರವು ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೊಳಿಸಿತ್ತು.

ಕ್ಷೀರಭಾಗ್ಯ ಜಾರಿಗೊಂಡ ನಂತರದಿಂದ ಶಾಲಾ ಮಕ್ಕಳ ಪೌಷ್ಟಿಕ ಮಟ್ಟ ಸುಧಾರಣೆಯಾಗಿದೆ, ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಹೆಚ್ಚಾಗಿದೆ ಮತ್ತು ರಾಜ್ಯದ ಹಾಲು ಉತ್ಪಾದಕ ಒಕ್ಕೂಟಗಳಿಗೂ ಬಲ ಬಂದಿದೆ ಎನ್ನುವುದನ್ನು ತಿಳಿಸಲು ಹೆಮ್ಮೆಯಾಗುತ್ತದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Back to top button