Breaking Newsಸುದ್ದಿ ಸಮಾಚಾರ

ಬೆಂಗಳೂರಿನ ಇಸ್ರೋ ಸಂಸ್ಥೆಗೆ ಆಗಮಿಸಿದ ಪ್ರಧಾನಿ |ಅದ್ದೂರಿ ಸ್ವಾಗತ ಕೋರಿದ ಬಿಜೆಪಿ ಕಾರ್ಯಕರ್ತರು

ಬೆಂಗಳೂರು:ಚಂದ್ರಯಾನ-3 ಯಶಸ್ವಿಗೊಳಿಸಿದ ಇಸ್ರೋ ದೇಶದ ಹಿರಿಮೆಯನ್ನು ಹೆಚ್ಚಿಸಿತು. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ಯ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿ, ಪೀಣ್ಯದಲ್ಲಿರುವ ಇಸ್ರೋ ಪ್ರಧಾನ ಕಚೇರಿಗೆ ತೆರಳಿದ್ದಾರೆ.

ಇಸ್ರೋದ ವಿಜ್ಞಾನಿಗಳನ್ನು ಭೇಟಿ ಮಾಡಲು ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಪೋಸ್ಟರ್‌ಗಳು ಮತ್ತು ರಾಷ್ಟ್ರಧ್ವಜದೊಂದಿಗೆ ಸ್ಥಳೀಯರು, ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದ ಹೊರಗೆ ಬೀದಿಗಳಲ್ಲಿ ನಿಂತು ಸ್ವಾಗತಿಸಿದರು.

Leave a Reply

Your email address will not be published. Required fields are marked *

Back to top button