Breaking Newsಸುದ್ದಿ ಸಮಾಚಾರ

ಸಾಮಾಜಿಕ ಜಾಲತಾಣಗಳಲ್ಲಿರುವ ಡಿಪಿಗಳಲ್ಲೂ ರಾಷ್ಟ್ರಧ್ವಜವನ್ನು ಹಾಕುವಂತೆ ಕರೆ ನೀಡಿದ ಪ್ರಧಾನಿ ಮೋದಿ

ನವದೆಹಲಿ: ದೇಶವು 76ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಆಚರಣೆಗೆ ಸಕಲ ರೀತಿಯಿಂದ ಸಜ್ಜಾಗುತ್ತಿದೆ. ಕಳೆದ ಬಾರಿ ಮನೆ ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸಿ ಎಂದು ಕರೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಈಗ ಸಾಮಾಜಿಕ ಜಾಲತಾಣಗಳಲ್ಲಿರುವ ಡಿಪಿಗಳಲ್ಲೂ ರಾಷ್ಟ್ರಧ್ವಜವನ್ನು ಹಾಕುವಂತೆ ಕರೆ ನೀಡಿದ್ದಾರೆ.

ಇಂದು ಬೆಳಿಗ್ಗೆ ಪ್ರಧಾನಿಯವರು ಟ್ವೀಟ್ ಮಾಡಿದ ಬೆನ್ನಲ್ಲೇ ಅವರ ಟ್ವಿಟ್‌ ಅನ್ನು ಸುಮಾರು ಮಿಲಿಯನ್‌ ಜನ ವೀಕ್ಷಿಸಿದ್ದು, ಈಗಾಗಲೇ ರೀಪೋಸ್ಟ್ ಮಾಡಲಾಗಿದೆ. ಅದರ ಜೊತೆಗೆ ಇದಕ್ಕೆ ಪ್ರತಿಕ್ರಿಯೆಯ ಜೊತೆ ರಿಟ್ವಿಟ್ ಮಾಡಿದ್ದಾರೆ ಎನ್ನಲಾಗಿದೆ.

ಪ್ರಧಾನಿ ಟ್ವೀಟ್ ಅನ್ನು ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ವಿಜಯೇಂದ್ರ ಯಡಿಯೂರಪ್ಪ ಸೇರಿದಂತೆ ಅನೇಕ ಬಿಜೆಪಿ ನಾಯಕರು ಹಂಚಿಕೊಂಡಿದ್ದಾರೆ.

Leave a Reply

Your email address will not be published. Required fields are marked *

Back to top button