Breaking Newsಸುದ್ದಿ ಸಮಾಚಾರ

ಕರ್ನಾಟಕ ಕಾರ್ಮಿಕ ಪತ್ರಿಕೆ ಬಿಡುಗಡೆಗೊಳಿಸಿದ ಸಚಿವ ಸಂತೋಷ್ ಲಾಡ್

ಬೆಂಗಳೂರು, ಆಗಸ್ಟ್ 10: ಇಂದು ವಿಧಾನಸೌಧದ ಅಧಿಕೃತ ಕೊಠಡಿಯಲ್ಲಿ ಕರ್ನಾಟಕ ಕಾರ್ಮಿಕ ಪತ್ರಿಕೆ (ಕನಿಷ್ಠ ವೇತನ ಅಧಿಸೂಚನೆಗಳ ವಿಶೇಷ ಸಂಚಿಕೆ 2023-24) ಅನ್ನು ಬಿಡುಗಡೆಗೊಳಿಸಿದರು.

ಪ್ರತಿ ವರ್ಷವೂ ಕಾರ್ಮಿಕ ಇಲಾಖೆಯ ವತಿಯಿಂದ ಈ ವಿಶೇಷ ಪತ್ರಿಕೆ ಹೊರಬರುತ್ತಿದ್ದು, ಕಾರ್ಮಿಕರ ಪ್ರಸ್ತುತ ವೇತನ ಹಾಗೂ ಅದರ ಕುರಿತ ಸಮಗ್ರ ಮಾಹಿತಿಯನ್ನು ಈ ಕೈಪಿಡಿ ಹೊಂದಿರುತ್ತದೆ.

ಈ ಸಂದರ್ಭದಲ್ಲಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಮಹಮ್ಮದ್‌ ಮೊಹಸೀನ್‌, ಕಾರ್ಮಿಕ ಆಯುಕ್ತರಾದ ಡಾ. ಎಚ್.ಎನ್.ಗೋಪಾಲಕೃಷ್ಣ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿಗಳಾದ ಶ್ರೀಮತಿ ಭಾರತಿ. ಡಿ ಹಾಗೂ ಇಲಾಖೆಯ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Back to top button