Breaking Newsಸಚಿವರ ಕಚೇರಿಯಿಂದ

ಧಾರವಾಡದಲ್ಲಿ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರಿಂದ ಧ್ವಜಾರೋಹಣ ಕಾರ್ಯಕ್ರಮ

ಧಾರವಾಡ : ರಾಜ್ಯ ಸರ್ಕಾರವು ನಾಡಿನ ಜನರ ಕಲ್ಯಾಣಕ್ಕಾಗಿ ಜಾರಿಗೊಳಿಸಿರುವ ನೂತನ ಮಹತ್ವಾಕಾಂಕ್ಷಿ ಯೋಜನೆಗಳಾದ ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿಗೆ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ದೊರಕಿದೆ. ಯುವನಿಧಿ ಯೋಜನೆ ಜಾರಿಗೆ ಅತೀ ಶೀಘ್ರದಲ್ಲಿ ಜಾರಿಯಾಗಲಿದ್ದು, ಜಿಲ್ಲೆಯ ಅಭಿವೃದ್ಧಿಗೆ ಸದಾ ಬದ್ಧ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.

77 ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಧಾರವಾಡದ ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಧ್ವಜಾರೋಹಣ ನೆರವೇರಿಸಿದರು.

ದೇಶಕ್ಕೆ ಶಾಂತಿ ಹಾಗೂ ಅಹಿಂಸಾ ಮಾರ್ಗದಿಂದ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮಾ ಗಾಂಧೀಜಿ ಹಾಗೂ ಈ ಹೋರಾಟದಲ್ಲಿ ದುಡಿದ ಮತ್ತು ಮಡಿದ ಮಹಾನುಭಾವರನ್ನು ಮತ್ತೊಮ್ಮೆ ನೆನಪಿಸಿಕೊಳ್ಳೋಣ. ಜಿಲ್ಲೆಯ ಅಭಿವೃದ್ಧಿಗೆ ಸಲಹೆ ಹಾಗೂ ಸಹಕಾರವನ್ನು ನೀಡುವಂತೆ ಸಾರ್ವಜನಿಕರಲ್ಲಿ ವಿನಂತಿಸಿದರು.

ನಂತರ ಜಿಲ್ಲೆಯ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಿದರು.

ಬಳಿಕ ಪೊಲೀಸ್, ಎನ್ ಸಿ ಸಿ ಸೇರಿದಂತೆ ತೆರೆದ ವಾಹನದಲ್ಲಿ ಸಚಿವ ಸಂತೋಷ್ ಲಾಡ್ ಪರಿವೀಕ್ಷಣೆ ಮಾಡಿದರು. ಬಳಿಕ 20 ಕ್ಕೂ ಅಧಿಕ ತುಕಡಿಗಳು ಸಚಿವರಿಗೆ ಗೌರವ ಸಮರ್ಪಣೆ ಮಾಡಿದರು.

ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಗುರುದತ್‌ ಹೆಗಡೆ, ಪೊಲೀಸ್‌ ಆಯುಕ್ತರಾದ ರೇಣುಕಾ ಕೆ ಸುಕುಮಾರ, ಪೊಲೀಸ್‌ ವರಿಷ್ಠಾಧಿಕಾರಿ ಲೋಕೇಶ್‌ ಜಿ ಜಗಲಾಸರ, ಜಿಲ್ಲಾ ಪಂಚಾಯಿತಿ ಸಿಇಒ ಸ್ವರೂಪ ಟಿ ಕೆ ಮತ್ತಿತರರ ಅಧಿಕಾರಿಗಳು, ಸಾರ್ವಜನಿಕರು, ಶಾಲಾ ಮಕ್ಕಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Back to top button