Breaking Newsಸಚಿವರ ಕಚೇರಿಯಿಂದ

ಕೆಪಿಸಿಸಿ ಕೇಂದ್ರ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಸಚಿವ ಸಂತೋಷ್‌ ಲಾಡ್‌

ಬೆಂಗಳೂರು: ಕೆಪಿಸಿಸಿ ಕೇಂದ್ರ ಕಚೇರಿಯಲ್ಲಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಇಂದು ಅಹವಾಲು ಆಲಿಸಿದರು.

ರಾಜ್ಯದ ವಿವಿಧೆಡೆಯಿಂದ ಬಂದಿದ್ದ ಸಾರ್ವಜನಿಕರು, ಕಾರ್ಮಿಕರು ಹಾಗೂ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ಅವರ ಅಹವಾಲುಗಳನ್ನು ಸ್ವೀಕರಿದರು.

ಎಲ್ಲ ಅಹವಾಲುಗಳನ್ನು ಶೀಘ್ರವಾಗಿ ಪರಿಹರಿಸಿಕೊಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಲಾಡ್‌ ಅವರು ತಿಳಿಸಿದರು.

ಈ ವೇಳೆ ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ ನ ರಾಜ್ಯಾಧ್ಯಕ್ಷ ಲಕ್ಷ್ಮಿ ವೆಂಕಟೇಶ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕವಿತಾ ರೆಡ್ಡಿ , ಕಾಂಗ್ರೆಸ್ ವಕ್ತಾರ ಎ ಎನ್ ನಟರಾಜ್ ಗೌಡ , ಕೆಪಿಸಿಸಿ ಸದಸ್ಯ ಬಿ ಆರ್‌ ನಾಯ್ಡು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Back to top button