Breaking Newsಕರ್ನಾಟಕ ರಾಜಕೀಯ

ಚೈತ್ರಾ ಕುಂದಾಪುರ ಪ್ರಕರಣ | ಉಪ್ಪು ತಿಂದವರು ನೀರು ಕುಡಿಯಲೇ ಬೇಕು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಉಡುಪಿ: ಚೈತ್ರಾ ಕುಂದಾಪುರ ಪ್ರಕರಣದಲ್ಲಿ ಉಪ್ಪು ತಿಂದವರು ನೀರು ಕುಡಿಯಲೇಬೇಕು. ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇಬೇಕು ಎಂದು ಸಂಸದೆ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಚೈತ್ರಾ ಬಂಧನಕ್ಕೂ ಬಿಜೆಪಿಗೆ ಯಾವುದೇ ಸಂಬಂಧ ಇಲ್ಲ. ಚೈತ್ರಾ ರಕ್ಚಣೆಗೆ ಬಿಜೆಪಿ ಪ್ರಯತ್ನ ಮಾಡುತ್ತಿಲ್ಲ ಎಂದು ಅವರು ಹೇಳಿದರು.

ಬಿಜೆಪಿಯಲ್ಲಿ ಹಣ ಕೊಟ್ಟು ಟಿಕೆಟ್‌ ಪಡೆಯುವ ಸಂಪ್ರದಾಯವಿಲ್ಲ. ನನಗೂ ಚೈತ್ರಾಗೂ ಯಾವುದೇ ಸಂಬಂಧ ಇಲ್ಲ. ಯಾವುದೋ ಒಂದು ಕಾರ್ಯಕ್ರಮದಲ್ಲಿ ಫೋಟೊ ತೆಗೆಸಿಕೊಂಡಿರಬಹುದು. ಅದನ್ನೇ ಇಟ್ಟುಕೊಂಡು ಸಂಬಂಧ ಕಲ್ಪಿಸುವುದು ಸರಿಯಲ್ಲ ಎಂದರು.

Leave a Reply

Your email address will not be published. Required fields are marked *

Back to top button