Breaking Newsಮುಖ್ಯಮಂತ್ರಿ ನ್ಯೂಸ್

ಆಗಸ್ಟ್ 3ರಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿರುವ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 3ರಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ.

ಅಂದು ಬೆಳಗ್ಗೆ 11 ಗಂಟೆಗೆ ಸಿದ್ದರಾಮಯ್ಯ ಅವರು ಮೋದಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. 7 ವರ್ಷಗಳ ನಂತರ ಪ್ರಧಾನಿ ಮೋದಿಯವರನ್ನು ಭೇಟಿಯಾಗಲಿರುವ ಸಿದ್ದರಾಮಯ್ಯ ರಾಜ್ಯದ ಪ್ರವಾಹ ಪರಿಸ್ಥಿತಿಯನ್ನು ಚರ್ಚಿಸಲಿದ್ದಾರೆ ಅಗತ್ಯ ನೆರವಿಗೆ ಬೇಡಿಕೆ ಇಡಲಿದ್ದಾರೆ ಎನ್ನಲಾಗಿದೆ.

ಅದೇ ದಿನ ಮುಖ್ಯಮಂತ್ರಿಯವರು ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್, ರಕ್ಷಣಾ ಸಚಿವರಾದ ರಾಜನಾಥ ಸಿಂಗ್ ಹಾಗೂ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಲಿದ್ದಾರೆ.

Leave a Reply

Your email address will not be published. Required fields are marked *

Back to top button