Breaking NewsOthersಸುದ್ದಿ ಸಮಾಚಾರ

ಯುವ ಬ್ರಿಗೇಡ್ ಸದಸ್ಯ ವೇಣುಗೋಪಾಲ್ ಹತ್ಯೆ ಪ್ರಕರಣ, ಆರೋಪಿಗಳ ಮೇಲೆ ಕ್ರಮಕ್ಕೆ ಸದನದಲ್ಲಿ ಆಗ್ರಹಿಸಿದ ಬೊಮ್ಮಾಯಿ

ಬೆಂಗಳೂರು: ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ವೇಣುಗೋಪಾಲ ಎನ್ನುವ ವ್ಯಕ್ತಿಯನ್ನು  ಬರ್ಬರ ಹತ್ಯೆ ಮಾಡಲಾಗಿದೆ ಹಂತರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು. 

ಹನುಮ ಜಯಂತಿ ಕಾರ್ಯಕ್ರಮದಲ್ಲಿ ಅವಕಾಶ ನೀಡಲಿಲ್ಲಿ  

ದೇವರ ಫೋಟೊ ಜಾಗದಲ್ಲಿ ಪುನಿತ್ ರಾಜಕುಮಾರ್ ಫೋಟೊ  ಇಡುವ ಕುರಿತು ಮಣಿಕಂಠ, ವೇಣುಗೋಪಾಲ ನಡುವೆ ಗಲಾಟೆಯಾಯಿತು. 

ಮಾರನೇ ದಿನ ಮಾತುಕತೆ ಮಾಡಲು ಕರೆಯಿಸಿಕೊಂಡು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದರು. ಅವರನ್ನು ಆಸ್ಪತ್ರೆಗೆ ತೆಗೆದುಕೊಂಡು ಹೊಗುವಾಗ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದಾರೆ.

ಇಷ್ಟು ಸಣ್ಣ ವಿಚಾರಕ್ಕೆ ಕೊಲೆಯಾಗಿದ್ದರೆ ಇದು ಆಘಾತಕಾರಿ , ಧಾರ್ಮಿಕ ಆಚರಣೆಗಳು ನಿರಂತರ ನಡೆಯುತ್ತವೆ. ಈ ರೀತಿಯ ಕೊಲೆಗಳು ಸಮಾಜದ ಮೇಲೆ ಪರಿಣಾಮ ಬೀರುತ್ತವೆ. ಇದರಲ್ಲಿ ಯಾರೇ ಇದ್ದರೂ ಅವರ ವಿರುದ್ದ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು. 

ಈ ರೀತಿಯ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ. ಪೊಲಿಸರು ಇನ್ನೂ ಯಾರನ್ನೂ ಬಂಧಿಸಿಲ್ಲ. ಆದರೆ ಮೆಲಧಿಕಾರಿಗಳು ಆರೋಪಿಗಳ ಹೆಸರುಗಳನ್ನು ಹೇಳದೇ ದಾರಿ ತಪ್ಪಿಸುತ್ತಿದ್ದಾರೆ. ಸಕಲೇಶಪುರ, ಕಲಬುರ್ಗಿ, ನಂಜನಗೂಡಿನಲ್ಲಿ ಹಲವು ಪ್ರಕರಣಗಳು ನಡೆದಿವೆ. ಇಂತಹ ಪ್ರಕರಣಗಳನ್ನು ಸರ್ಕಾರ ಗಂಭಿರವಾಗಿ ಪರಿಗಣಿಸಬೇಕು. ಇಲ್ಲದಿದ್ದರೆ ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತದೆ ಎಂದು ಹೇಳಿದರು.

Leave a Reply

Your email address will not be published. Required fields are marked *

Back to top button